Skip to content
Melo Podcasts Home
CategoriesLanguagesFollowing

Episode notes

ಗುಡುಗು , ಸಿಡಿಲು ಮಳೆಗಾಲದಲ್ಲಿ ಸರ್ವೇ ಸಾಮಾನ್ಯ . ಗುಡುಗು ಕೇಳುವ ಮೊದಲೇ ಸಿಡಿಲು ಕಾಣುವುದೂ ಸಾಮಾನ್ಯ . ಆದರೆ , ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಮನಗಂಡು ಗುಡುಗು , ಸಿಡಿಲಿನ ಸುತ್ತ ಹೆಣೆದಿರುವ ಈ ಕತೆ , ಸಿಡಿಲನ್ನು ಚೂಟಿ ಟಗರಿಗೂ , ಗೂಡುಗನ್ನು ಮಗನನ್ನು ಸರಿ ಹಾದಿಗೆ ತರುವ ಅಮ್ಮನಿಗೂ ಹೋಲಿಸುವ ಮೂಲಕ ಕೇಳುವುದಕ್ಕೆ ವಿಶಿಷ್ಟ ಅನುಭವ ಕೊಡುತ್ತದೆ . Thunder and Lightning are common phenomena. This folktale compare lightning to a mischievous Ram and the thunder as the mom that follows her son around scolding him for his mischiefs. A unique story.

Kelirondu Katheya ಕೇಳಿರೊಂದು ಕಥೆಯ

by Kelirondu Katheya Team · Kannada · Kids & Family

Kannada Stories for children.

More from Kelirondu Katheya ಕೇಳಿರೊಂದು ಕಥೆಯ

  1. E112 · 14 Dec 2020 · 7 min

    Ep109 - ಹಸು ಮತ್ತು ನೊಣ

    ಹಸುಗಳಿಗೂ ಅವುಗಳ ಸುತ್ತ ಸದಾ ಜುಯ್ ಅಂತ ಸುತ್ತುವ ನೊಣಗಳಿಗೂ ಅದೇನೋ ವಿಚಿತ್ರ ಸಂಬಂಧ . ವೈಜ್ಞಾನಿಕವಾಗಿ ನೊಣಗಳಿಂದ ಕಣ್ಣಿನ ರೋಗ ( Pink Eye ) ಬರುವುದು ಸಹಜವಾದರೂ , ಆಫ್ರಿಕಾದ ಜಾನಪದ ಕತೆಗಳ ಪ್ರಕಾರ ನೊಣಗಳು ತೊಂದರೆ ಕೊಡುವುದಕ್ಕೆ ಹಸುಗಳೇ ಕಾರಣವಂತೆ . !

  2. E111 · 28 Nov 2020 · 6 min

    Ep108 - ಬಾವಲಿಗಳು ರಾತ್ರಿಯಷ್ಟೇ ಹೊರಗೇಕೆ ಬರುತ್ತವೆ?

    ಬಾವಲಿ ( Bat ) ವಿಚಿತ್ರ ಹಾಗೂ ಕುತೂಹಲಕಾರಿ ಜೀವಿ . ಅತ್ತ ಪ್ರಾಣಿಯೂ ಅಲ್ಲದೆ , ಇತ್ತ ಹಕ್ಕಿಯೂ ಅಲ್ಲದ ಬಾವಲಿ ರಾತ್ರಿ ಅಷ್ಟೇ ಹೊರ ಬರುತ್ತವೆ . ವೈಜ್ಞಾನಿಕವಾಗಿ ಬಾವಲಿಗಳಿಗೆ ದೃಷ್ಟಿ ಅಷ್ಟು ಬಲವಾಗಿ ವೃದ್ಧಿಯಾಗಿಲ್ಲ , ಬದಲಾಗಿ Echo location , ಅಂದರೆ ಸೂಕ್ಷ್ಮ ಧ್ವನಿ ತರಂಗಗಳ ನೆರವಿನಿಂದ ದಾರಿ , ಊಟ ಹುಡುಕುತ್ತವೆ . ನೂರಾರು ವರ್ಷಗಳ ಹಿಂದೆ ಆಫ್ರಿಕಾದ ಜನರಿಗೆ ಈ ಬಾವಲಿ ರಾತ್ರಿಯಷ್ಟೇ ಹೊರಗೇಕೆ ಬರುತ್ತದೆ ಅನ್ನುವ ಪ್ರಶ್ನೆಗೆ ಸೊಗಸಾದ ಕತೆಯ ಮೂಲಕ ವಿವರಿಸಿದ್ದಾರೆ . ಕೇಳೋಣ ಬನ್ನಿ .

  3. E110 · 14 Nov 2020 · 7 min

    [ ವಿಶೇಷ ] - ದೀಪಾವಳಿ ಹಬ್ಬ

    ದೀಪಾವಳಿ ಹಬ್ಬದ ಶುಭಾಶಯಗಳು ಎಲ್ಲರಿಗೂ ಗೆಳೆಯರೇ . ದೀಪಾವಳಿ ಭಾರತೀಯರಿಗೆ ವಿಶೇಷ ಹಬ್ಬ . ಈ ಹಬ್ಬದ ಹಿಂದೆ ಬಹಳಷ್ಟು ಉಪಕತೆಗಳಿವೆ . ಈ ಕಂತಿನಲ್ಲಿ ಈ ಹಬ್ಬದ ಬಗ್ಗೆ ಮೂರು ಕತೆಗಳನ್ನು ಕೇಳೋಣ .

  4. E108 · 18 Oct 2020 · 6 min

    Ep106 - ಸುಳ್ಳು ಹೇಳದಿರುವ ಮನುಷ್ಯ

    ಸುಳ್ಳು ಹೇಳುವುದು ಅಂದರೆ ಸಹಜ . ಅದರಲ್ಲೂ , ಕೆಲವರಿಗೆ ಸುಳ್ಳು ಹೇಳುವುದು ಚಟ ವಾಗಿ ಬಿಟ್ಟಿರುತ್ತದೆ . ಹಾಗಿರುವಾಗ , ಒಂದೂ ಸುಳ್ಳು ಹೇಳದೆ ಇರುವ ಮನುಷ್ಯ ಒಬ್ಬ ಬದುಕಿದ್ದ ಅಂದರೆ ಆಶ್ಚರ್ಯ ಆಗುತ್ತೆ ಅಲ್ವಾ ? ಈ ಕತೆಯಲ್ಲಿ ಆ ಮನುಷ್ಯನನ್ನ ಭೇಟಿ ಮಾಡೋಣ . ಅವನಿಂದ ಸುಳ್ಳು ಹೇಳಿಸೋಕೆ ಪಾಡು ಪಟ್ಟ ರಾಜನ ಬಗ್ಗೆಯೂ ಕೇಳೋಣ

  5. E107 · 11 Oct 2020 · 7 min

    Ep105 - ಸಿಂಹವನ್ನು ಸೋಲಿಸಿದ ತೋಳ ( ಉತ್ತರ ಕರ್ನಾಟಕ ಶೈಲಿ)

    ಕಳೆದ ವಾರ ಇದೇ ಕತೆಯ ಸರಳ ಗನ್ನಡ ಅವತರಣಿಕೆ ( version ) ಅನ್ನು ಮಾಡಿದ್ದೆವು . ಈ ವಾರ , ಜೈರಾಜ್ ಗಲಗಲಿ ಅವರು ಈ ಕತೆಯನ್ನು ಉತ್ತರ ಕರ್ನಾಟಕ ಶೈಲಿ ಒಳಗ ಹೇಳಿದ್ದಾರೆ . ನೀವೂ , ನಾವೂ ಕೇಳಿ ಮಜಾ ತಗಳ್ಳೋಣಾಂತ ? ಏನಂತೀರಿ ?

  6. E136 · 19 Jul 2021 · 7 min

    Ep131 - ಬಣ್ಣದ ಪ್ರಾಣಿ

    ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು . ದುಬಾರಿಯಾದ ಆಟದ ಸಾಮಾನಿರಲಿ , ಮೂಲೆಯಲ್ಲಿ ಬಿದ್ದಿರೋ ಕಲ್ಲಿರಲಿ , ಮಕ್ಕಳಿಗೆ ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು . ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು . ಪ್ರಾಣಿಯನ್ನು ಮಕ್ಕಳು ಏನು ಮಾಡಿದರು ? ಬನ್ನಿ , ಈ ಕತೆಯಲ್ಲಿ ತಿಳಿಯೋಣ .

  7. E135 · 11 Jul 2021 · 9 min

    ಹನುಮಂತನ ಚಿಟಿಕೆ

    ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ? ಹೌದು .. ರಾಮಾಯಣದ ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ .

  8. E134 · 4 Jul 2021 · 5 min

    ಕಾಗೆ ಮರಿ ಹಾಗೂ ಹಂಸದ ಕತೆ

    ಕಾಡಿನಲ್ಲಿ ವಾಸ ಆಗಿದ್ದ ಕಾಗೆ ಮರಿಗೆ ನೀರಿನಲ್ಲಿ ಈಜುತ್ತಿದ್ದ ಬೆಳ್ಳಗೆ ಸುಂದರವಾಗಿದ್ದ ಹಂಸವನ್ನ ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು . ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ? ಸಂವಿತ್ ಫೌಂಡೇಶನ್ ಅವರ ಸಹಯೋಗದಲ್ಲಿ ಮಾಡಿದ ಈ ಪುಟ್ಟ ಕತೆ ಹೇಳುವ ನೀತಿ ಮಾತ್ರ ಬಹಳ ದೊಡ್ಡದು .

  9. E133 · 27 Jun 2021 · 9 min

    ನೀಲಿ ಮರಿ ಆನೆ - ಗೆಳೆತನದ ಬಗ್ಗೆ ಒಂದು ಕತೆ

    ಕಾಡಿನಲ್ಲಿ ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ ಬಣ್ಣ ಇತ್ತು !. ಆ ಬಣ್ಣದ ಜತೆ ಕಾಡಿನಲ್ಲಿ ಬೇರೆ ಮರಿಗಳ ಜತೆ ಬೇರೆಯೋಕೆ ಈ ಆನೆ ಮರಿಗೆ ಸಾಧ್ಯ ಆಯಿತೇ ?

  10. E132 · 20 Jun 2021 · 7 min

    ಕೆಂಪು ಕಾರು - ಸೇವಾ ಮನೋಭಾವದ ಬಗ್ಗೆ ಒಂದು ಕತೆ

    ರಕ್ಷಿತ್ ಗೆ ಕಾರುಗಳು ಅಂದರೆ ತುಂಬಾ ಇಷ್ಟ. ಒಂದು ದಿವಸ ಅವನ ಅಮ್ಮ ಅವನಿಷ್ಟದ ಕೆಂಪು ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ ದಾನ ಮಾಡಿದಾಗ ರಕ್ಷಿತ್ ಗೆ ಆದ ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು ಮಾಡಿದ ? ಬನ್ನಿ ಈ ಕತೆ ಕೇಳಿ ತಿಳಿದುಕೊಳ್ಳೋಣ

Every episode of Kelirondu Katheya ಕೇಳಿರೊಂದು ಕಥೆಯ →

Take it with you

The Melo app keeps playing with the screen off, works in the car and on your watch, wakes you to your station, and browses the whole catalogue offline. Free, no ads, no account.

Get it on Google Play