Episode notes
ಹಸುಗಳಿಗೂ ಅವುಗಳ ಸುತ್ತ ಸದಾ ಜುಯ್ ಅಂತ ಸುತ್ತುವ ನೊಣಗಳಿಗೂ ಅದೇನೋ ವಿಚಿತ್ರ ಸಂಬಂಧ . ವೈಜ್ಞಾನಿಕವಾಗಿ ನೊಣಗಳಿಂದ ಕಣ್ಣಿನ ರೋಗ ( Pink Eye ) ಬರುವುದು ಸಹಜವಾದರೂ , ಆಫ್ರಿಕಾದ ಜಾನಪದ ಕತೆಗಳ ಪ್ರಕಾರ ನೊಣಗಳು ತೊಂದರೆ ಕೊಡುವುದಕ್ಕೆ ಹಸುಗಳೇ ಕಾರಣವಂತೆ . !
Kelirondu Katheya ಕೇಳಿರೊಂದು ಕಥೆಯ
by Kelirondu Katheya Team · Kannada · Kids & Family
Kannada Stories for children.
More from Kelirondu Katheya ಕೇಳಿರೊಂದು ಕಥೆಯ
-
E115 · 24 Jan 2021 · 5 min
Ep111 - ಸೂರ್ಯ, ಚಂದ್ರ, ಮತ್ತು ಸಮುದ್ರಗಳ ಕತೆ
ಸೂರ್ಯ ಚಂದ್ರರು ಒಂದು ಕಾಲದಲ್ಲಿ ನಮ್ಮ ನಿಮ್ಮ ಥರ ಭೂಮಿಯ ಮೇಲೆ ಇದ್ರಂತೆ . ! . ಆಶ್ಚರ್ಯ ಆಗುತ್ತಲ್ಲಾ ? ಹೌದು , ಸೂರ್ಯ ಚಂದ್ರರು ಮನುಷ್ಯರ ಥರ ಮನೆಯಲ್ಲಿ ಇರ್ತಿದ್ರು ಅಂತ ಆಫ್ರಿಕನ್ನರು ನಂಬುತ್ತಾರಂತೆ . ಹಾಗಾದ್ರೆ , ಈಗ್ಯಾಕೆ ಆಕಾಶದಲ್ಲಿ ಇರ್ತಾರೆ ? ತಿಳಿಯೋಕೆ , ಈ ಕತೆ ಕೇಳಿ .
-
E114 · 10 Jan 2021 · 14 min
Ep110 - ಸಿಡುಕ ಸಿದ್ದ ಹಾಗೂ ಗುಹೆಯ ಮನುಷ್ಯ
ಸಿಡುಕ ಸಿದ್ದನಿಗೆ ಸಿಟ್ಟು ಎಷ್ಟು ಜಾಸ್ತಿಯೋ ಪೆದ್ದುತನ ಸ್ವಲ್ಪ ಅದಕ್ಕಿಂತ ಜಾಸ್ತಿ. ಈ ಕತೆಯಲ್ಲಿ ಸಿದ್ಧನಿಗೆ ಗುಹೆಯ ಮನುಷ್ಯನಿಂದ ಊಹಿಸಲಾರದಷ್ಟು ಐಶ್ವರ್ಯ ಸಿಕ್ಕರೂ, ಪಾಪ ಅದನ್ನು ಉಳಿಸಿಕೊಳ್ಳೋಲಾಗಲಿಲ್ಲ. ಹೇಗೆ, ಯಾಕೆ ಅನ್ನುವುದನ್ನು ಕತೆಯಲ್ಲಿ ಕೇಳೋಣ. ನಮಗೆ ಎಷ್ಟು ಅನುಭವ ಇದೆಯೋ ಅಷ್ಟೇ ದಕ್ಕುವುದು ಅನ್ನುವುದಕ್ಕೆ ಈ ಕತೆ ಉತ್ತಮ ಉದಾಹರಣೆ.
-
E113 · 27 Dec 2020 · 7 min
Repeat - ಪಾತ್ರೆ ಮರಿ ಇಟ್ಟ ಕತೆ
ಕೇಳಿರೊಂದು ಕಥೆಯ ಸರಣಿಯ ಕತೆಗಳಲ್ಲಿ ನಾಸ್ರುದ್ದೀನ್ ಹೊಡ್ಜಾನ ಕತೆಗಳು ಅತಿ ಜನಪ್ರಿಯ. 2019 ರಲ್ಲಿ ಪ್ರಕಟವಾಗಿದ್ದ ಈ ಕತೆಯ ಮರು ಪ್ರಸಾರ . ನಾಸ್ರುದ್ದೀನ್ ಹೊಡ್ಜ ಪಕ್ಕದ ಮನೆಯವನ ಹತ್ತಿರ ಪಾತ್ರೆ ಸಾಲ ಪಡೆದು ವಾಪಸ್ ಕೊಡುವಾಗ ಪಾತ್ರೆ ಅಷ್ಟೇ ಅಲ್ದೆ ಅದರ 'ಮರಿ ' ಯನ್ನೂ ಹೇಗೆ ಕೊಡಲು ಸಾಧ್ಯ ? ಪಾತ್ರೆ ಎಲ್ಲಾದ್ರೂ ಮರಿ ಇಡುತ್ಯೆ ? ಆದರೆ ' ಕೊಟ್ಟೋನು ಕೋಡಂಗಿ! ಇಸ್ಕೊಂಡೋನು ಈರಭದ್ರ " ಅನ್ನೋ ಗಾದೆಯ ಹಾಗೆ , ಆ ಪಕ್ಕದ ಮನೆಯವನಿಗಾದ್ರೂ ಗೊತ್ತಾಗಬೇಡವೇ ? ಹೊಡ್ಜ ಯಾಕೆ ಹೀಗೆ ಮಾಡಿದ , ಮುಂದೇನಾಯ್ತು ಅನ್ನೋದನ್ನು ಈ ಕತೆಯಲ್ಲಿ ಕೇಳಿ .
-
E111 · 28 Nov 2020 · 6 min
Ep108 - ಬಾವಲಿಗಳು ರಾತ್ರಿಯಷ್ಟೇ ಹೊರಗೇಕೆ ಬರುತ್ತವೆ?
ಬಾವಲಿ ( Bat ) ವಿಚಿತ್ರ ಹಾಗೂ ಕುತೂಹಲಕಾರಿ ಜೀವಿ . ಅತ್ತ ಪ್ರಾಣಿಯೂ ಅಲ್ಲದೆ , ಇತ್ತ ಹಕ್ಕಿಯೂ ಅಲ್ಲದ ಬಾವಲಿ ರಾತ್ರಿ ಅಷ್ಟೇ ಹೊರ ಬರುತ್ತವೆ . ವೈಜ್ಞಾನಿಕವಾಗಿ ಬಾವಲಿಗಳಿಗೆ ದೃಷ್ಟಿ ಅಷ್ಟು ಬಲವಾಗಿ ವೃದ್ಧಿಯಾಗಿಲ್ಲ , ಬದಲಾಗಿ Echo location , ಅಂದರೆ ಸೂಕ್ಷ್ಮ ಧ್ವನಿ ತರಂಗಗಳ ನೆರವಿನಿಂದ ದಾರಿ , ಊಟ ಹುಡುಕುತ್ತವೆ . ನೂರಾರು ವರ್ಷಗಳ ಹಿಂದೆ ಆಫ್ರಿಕಾದ ಜನರಿಗೆ ಈ ಬಾವಲಿ ರಾತ್ರಿಯಷ್ಟೇ ಹೊರಗೇಕೆ ಬರುತ್ತದೆ ಅನ್ನುವ ಪ್ರಶ್ನೆಗೆ ಸೊಗಸಾದ ಕತೆಯ ಮೂಲಕ ವಿವರಿಸಿದ್ದಾರೆ . ಕೇಳೋಣ ಬನ್ನಿ .
-
E110 · 14 Nov 2020 · 7 min
[ ವಿಶೇಷ ] - ದೀಪಾವಳಿ ಹಬ್ಬ
ದೀಪಾವಳಿ ಹಬ್ಬದ ಶುಭಾಶಯಗಳು ಎಲ್ಲರಿಗೂ ಗೆಳೆಯರೇ . ದೀಪಾವಳಿ ಭಾರತೀಯರಿಗೆ ವಿಶೇಷ ಹಬ್ಬ . ಈ ಹಬ್ಬದ ಹಿಂದೆ ಬಹಳಷ್ಟು ಉಪಕತೆಗಳಿವೆ . ಈ ಕಂತಿನಲ್ಲಿ ಈ ಹಬ್ಬದ ಬಗ್ಗೆ ಮೂರು ಕತೆಗಳನ್ನು ಕೇಳೋಣ .
-
E109 · 1 Nov 2020 · 7 min
Ep107 - ಗುಡುಗು ಮತ್ತು ಸಿಡಿಲು
ಗುಡುಗು , ಸಿಡಿಲು ಮಳೆಗಾಲದಲ್ಲಿ ಸರ್ವೇ ಸಾಮಾನ್ಯ . ಗುಡುಗು ಕೇಳುವ ಮೊದಲೇ ಸಿಡಿಲು ಕಾಣುವುದೂ ಸಾಮಾನ್ಯ . ಆದರೆ , ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಮನಗಂಡು ಗುಡುಗು , ಸಿಡಿಲಿನ ಸುತ್ತ ಹೆಣೆದಿರುವ ಈ ಕತೆ , ಸಿಡಿಲನ್ನು ಚೂಟಿ ಟಗರಿಗೂ , ಗೂಡುಗನ್ನು ಮಗನನ್ನು ಸರಿ ಹಾದಿಗೆ ತರುವ ಅಮ್ಮನಿಗೂ ಹೋಲಿಸುವ ಮೂಲಕ ಕೇಳುವುದಕ್ಕೆ ವಿಶಿಷ್ಟ ಅನುಭವ ಕೊಡುತ್ತದೆ . Thunder and Lightning are common phenomena. This folktale compare lightning to a mischievous Ram and the thunder as the mom that follows her son around scolding him for his mischiefs. A unique story.
-
E136 · 19 Jul 2021 · 7 min
Ep131 - ಬಣ್ಣದ ಪ್ರಾಣಿ
ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು . ದುಬಾರಿಯಾದ ಆಟದ ಸಾಮಾನಿರಲಿ , ಮೂಲೆಯಲ್ಲಿ ಬಿದ್ದಿರೋ ಕಲ್ಲಿರಲಿ , ಮಕ್ಕಳಿಗೆ ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು . ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು . ಪ್ರಾಣಿಯನ್ನು ಮಕ್ಕಳು ಏನು ಮಾಡಿದರು ? ಬನ್ನಿ , ಈ ಕತೆಯಲ್ಲಿ ತಿಳಿಯೋಣ .
-
E135 · 11 Jul 2021 · 9 min
ಹನುಮಂತನ ಚಿಟಿಕೆ
ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ? ಹೌದು .. ರಾಮಾಯಣದ ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ .
-
E134 · 4 Jul 2021 · 5 min
ಕಾಗೆ ಮರಿ ಹಾಗೂ ಹಂಸದ ಕತೆ
ಕಾಡಿನಲ್ಲಿ ವಾಸ ಆಗಿದ್ದ ಕಾಗೆ ಮರಿಗೆ ನೀರಿನಲ್ಲಿ ಈಜುತ್ತಿದ್ದ ಬೆಳ್ಳಗೆ ಸುಂದರವಾಗಿದ್ದ ಹಂಸವನ್ನ ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು . ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ? ಸಂವಿತ್ ಫೌಂಡೇಶನ್ ಅವರ ಸಹಯೋಗದಲ್ಲಿ ಮಾಡಿದ ಈ ಪುಟ್ಟ ಕತೆ ಹೇಳುವ ನೀತಿ ಮಾತ್ರ ಬಹಳ ದೊಡ್ಡದು .
-
E133 · 27 Jun 2021 · 9 min
ನೀಲಿ ಮರಿ ಆನೆ - ಗೆಳೆತನದ ಬಗ್ಗೆ ಒಂದು ಕತೆ
ಕಾಡಿನಲ್ಲಿ ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ ಬಣ್ಣ ಇತ್ತು !. ಆ ಬಣ್ಣದ ಜತೆ ಕಾಡಿನಲ್ಲಿ ಬೇರೆ ಮರಿಗಳ ಜತೆ ಬೇರೆಯೋಕೆ ಈ ಆನೆ ಮರಿಗೆ ಸಾಧ್ಯ ಆಯಿತೇ ?
